ಭಾನುವಾರ, ಜನವರಿ 24, 2021
26 °C

ಮಕರ ಸಂಕ್ರಾಂತಿ: ಗಂಗಾಸಾಗರದಲ್ಲಿ ಯಾತ್ರಾರ್ಥಿಗಳಿಂದ ಪವಿತ್ರ ಸ್ನಾನ

ಪಿಟಿಐ Updated:

ಅಕ್ಷರ ಗಾತ್ರ : | |

ಗಂಗಾಸಾಗರ್(ಪಶ್ಚಿಮ ಬಂಗಾಳ): ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಂಗಾ ಮತ್ತು ಬಂಗಾಳ ಕೊಲ್ಲಿಯ ಸಂಗಮದಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಸಾವಿರಾರು ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಿ, ಪ್ರಾರ್ಥನೆ ಸಲ್ಲಿಸಿದರು.

ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ. ತೀರ್ಥಯಾತ್ರೆ ನಡೆಯುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರು ಮತ್ತು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈ ಕೊರೆಯುವ ಚಳಿಯಲ್ಲೂ ದೇಶದ ವಿವಿಧ ಭಾಗಗಳಿಂದ ಯಾತ್ರಾರ್ಥಿಗಳು ಬಂದಿದ್ದು, ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ಬಾರಿ ಕೋವಿಡ್‌ನಿಂದಾಗಿ ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು