ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಬಂದ 1,000 ಮಂದಿ: 466 ಜನರ ಮಾಹಿತಿ ಲಭ್ಯ

Last Updated 30 ನವೆಂಬರ್ 2021, 3:17 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಪತ್ತೆಯಾದ ದಕ್ಷಿಣ ಆಫ್ರಿಕಾ ದೇಶಗಳಿಂದ ಕಳೆದ 15 ದಿನಗಳಲ್ಲಿ ಮುಂಬೈಗೆ 1,000 ಮಂದಿ ಬಂದಿದ್ದು, 66 ಮಂದಿಯ ಪಟ್ಟಿ ಸಿಕ್ಕಿದೆ ಎಂದು ಮುಂಬೈನ ಪಾಲಿಕೆಯ ಅಧಿಕಾರಿ ತಿಳಿಸಿದ್ದಾರೆ.

ಈಗಾಗಲೇ ಇದರಲ್ಲಿ 100 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ದೇಶಗಳಿಂದ 1,000 ಮಂದಿ ಮುಂಬೈಗೆ ಬಂದಿರುವುದಾಗಿ ವಿಮಾನ ನಿಲ್ದಾಣದ ಪ್ರಾಧಿಕಾರ ತಿಳಿಸಿದೆ. ಆದರೆ, ಅದರಲ್ಲಿ 466 ಮಂದಿಯ ಪಟ್ಟಿ ಮಾತ್ರ ಸಿಕ್ಕಿದ್ದು, ಅದರಲ್ಲಿ 100 ಮಂದಿಯ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಉಳಿದವರ ಮಾದರಿಯನ್ನೂ ಇಂದು ಅಥವಾ ನಾಳೆ ಸಂಗ್ರಹಿಸುವುದಾಗಿ ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್ ಕಾಕನಿ ಹೇಳಿದ್ದಾರೆ.

ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಿರುವ ಮಾದರಿಗಳ ಪರೀಕ್ಷಾ ವರದಿ ಇಂದು ಅಥವಾ ನಾಳೆ ಬರಲಿದ್ದು, ಪಾಸಿಟಿವ್ ಬಂದವರಿಗೆ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುವುದು. ಆ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದೇವೇಳೆ, ಓಮೈಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಪಾಲಿಕೆ ಅಡಿಯಲ್ಲಿ ಬರುವ ಅಂಧೇರಿಯ 5 ಆಸ್ಪತ್ರೆಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT