ಬುಧವಾರ, ನವೆಂಬರ್ 30, 2022
21 °C

ಉದ್ಯಮಿ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ: ವ್ಯಕ್ತಿ ಬಂಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬಕ್ಕೆ ಜೀವ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಅಫ್ಜಲ್‌ ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಫ್ಜಲ್‌ನನ್ನು ಬಂಧಿಸಿರುವ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬಂಧಿತ ಆರೋಪಿ 4 ನಾಲ್ಕು ಸಲ ಕರೆ ನೀಡಿ ಜೀವ ಬೆದರಿಕೆ ಹಾಕಿದ್ದ. ದೂರವಾಣಿ ಕರೆಗಳನ್ನು ಟ್ರ್ಯಾಕ್ ಮಾಡಿ ಅಫ್ಜಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: 

2021ರಲ್ಲಿ  ಅಂಬಾನಿ ಮನೆಯ ಬಳಿ ಸ್ಫೋಟಕವಿರಿಸಿದ್ದ ಕಾರು ಪತ್ತೆಯಾಗಿತ್ತು. ಅದರಲ್ಲಿ 20 ಜಿಲೆಟಿನ್ ಕಡ್ಡಿಗಳು ಸಿಕ್ಕಿದ್ದವು. ಈ ಹಿನ್ನಲೆಯಲ್ಲಿ ಮುಖೇಶ್ ಅವರಿಗೆ ಜೆಡ್ ಪ್ಲಸ್ ಸೆಕ್ಯೂರಿಟಿಯನ್ನು ಸರ್ಕಾರ ಕಲ್ಪಿಸಿದೆ. ಅದಾಗ್ಯೂ, ಇದರ ಖರ್ಚನ್ನು ಅಂಬಾನಿ ಅವರೇ ನೀಡುತ್ತಿದ್ದಾರೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು