ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಕೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ: ಆರೋಪಿ ಪೊಲೀಸ್‌ ವಶಕ್ಕೆ

Last Updated 16 ಆಗಸ್ಟ್ 2022, 14:17 IST
ಅಕ್ಷರ ಗಾತ್ರ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದ ಆಭರಣ ವ್ಯಾಪಾರಿಯನ್ನು ಇಲ್ಲಿನ ನ್ಯಾಯಾಲಯ ಆಗಸ್ಟ್‌ 20ರ ವರೆಗೆ ಪೊಲೀಸ್‌ ವಶಕ್ಕೆ ನೀಡಿದೆ.

ದಕ್ಷಿಣ ಮುಂಬೈಯಲ್ಲಿರುವ ರಿಲಯನ್ಸ್‌ ಫೌಂಡೇಷನ್‌ ಆಸ್ಪತ್ರೆಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಿಷ್ಣು ವಿದು ಬೌಮಿಕ್‌ (56) ಎಂಬುವವರನ್ನು ಪೊಲೀಸರು ಸೋಮವಾರ ಬಂಧಿಸಿದ್ದರು.

ಬೌಮಿಕ್‌ ಅವರು ದಕ್ಷಿಣ ಮುಂಬೈನಲ್ಲಿ ಆಭರಣದಂಗಡಿ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT