ಶುಕ್ರವಾರ, ಸೆಪ್ಟೆಂಬರ್ 17, 2021
26 °C

ಜೆಎನ್‌ಯು ಮೇಲೆ ದಾಳಿ ಬೆದರಿಕೆ: ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಸ್ವಾತಂತ್ರ್ಯ ದಿನದಂದು ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸುವ ಬೆದರಿಕೆಯೊಡ್ಡಿದ್ದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಡಿಯೊದಲ್ಲಿ ಬೆದರಿಕೆ ಒಡ್ಡುತ್ತಿದ್ದ ವಿಕಾಸ್‌ ಸೆಹ್ರಾವತ್‌ (30) ಮತ್ತು ರಾಜಕುಮಾರ್‌ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತಮ್‌ ನಗರ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

‘ವಿಡಿಯೊದಲ್ಲಿ ಮಾಜಿ ಶಾಸಕ, ದೆಹಲಿ ಕಾಂಗ್ರೆಸ್‌ ಮುಖಂಡ ಅಲ್ಕಾ ಲಂಬಾ ಅವರಿಗೆ ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಬಂಧಿಸಲಾಗಿದೆ. ತಾನು 2018ರಿಂದ ವಿಶ್ವ ಹಿಂದೂ ಪರಿಷತ್‌ ಜೊತೆಗೆ ಗುರುತಿಸಿಕೊಂಡಿದ್ದೇನೆ ಎಂದೂ ಬಂಧಿತ ತಿಳಿಸಿದ್ದಾನೆ’ ಎಂದೂ ಪೊಲೀಸರು ತಿಳಿಸಿದ್ದಾರೆ.

ಆತನ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಆದರೆ, ಜೆಎನ್‌ಯೂಗೂ ಸೆಹ್ರಾವತ್‌ನಿಗೂ ಸಂಬಂಧವಿಲ್ಲ. ಗಮನಸೆಳೆಯುವ ಉದ್ದೇಶದಿಂದ ಈ ವಿಡಿಯೊ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು