ಭಾನುವಾರ, ಫೆಬ್ರವರಿ 28, 2021
21 °C

ಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಅತ್ಯಾಚಾರ; ಕೊಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಹೋಬಾ: ಉತ್ತರಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದಿರುವ ಆರೋಪದಡಿ ಮೂವರನ್ನು ಮಂಗಳವಾರ ಬಂಧಿಸಲಾಗಿದೆ. ಸಂತ್ರಸ್ಥೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದರು.

‘ಶನಿವಾರ ಮಧ್ಯಾಹ್ನ ತರಕಾರಿ ತರಲೆಂದು ಮನೆಯಿಂದ ಹೊರಗೆ ಹೋಗಿದ್ದ 18 ವರ್ಷದ ಯುವತಿ ಮನೆಗೆ ವಾಪಾಸ್‌ ಬಂದಿರಲಿಲ್ಲ.ಬಳಿಕ ಆಕೆಯ ಶವ ಬೆಲಾತಾಲ್‌ ಪ್ರದೇಶದದ ಮರವೊಂದರಲ್ಲಿ ನೇಣು ಬಿಗಿದ ‍ಸ್ಥಿತಿಯಲ್ಲಿ ಪತ್ತೆಯಾಗಿತ್ತು’ ಎಂದು  ಪೊಲೀಸರು ತಿಳಿಸಿದರು.

‘ಈ ಪ್ರಕರಣ ಸಂಬಂಧ ಆರೋಪಿಗಳಾದ ರೋಹಿತ್‌, ಭುಪೇಂದ್ರ ಮತ್ತು ತರುಣನನ್ನು ಬಂಧಿಸಲಾಗಿದೆ. ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿ ರವೀಂದ್ರ ತಿವಾರಿ ಅವರು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು