ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಕಾಶಿಯಲ್ಲಿ ಮೂರು ಬಾರಿ ಭೂಕಂಪ

Last Updated 5 ಮಾರ್ಚ್ 2023, 11:46 IST
ಅಕ್ಷರ ಗಾತ್ರ

ಉತ್ತರ ಕಾಶಿ (ಪಿಟಿಐ): ಉತ್ತರಾಖಂಡದ ಉತ್ತರಕಾಶಿಯಲ್ಲಿ ಭಾನುವಾರ ಮಧ್ಯರಾತ್ರಿ ರಿಕ್ಟರ್‌ ಮಾಪಕದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಬಳಿಕ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 12.45ಕ್ಕೆ ಮೊದಲ ಬಾರಿ ಭೂಮಿ ಕಂಪಿಸಿದಾಗ ಅದರ ಕೇಂದ್ರಬಿಂದು ಭಟವರಿ ಪ್ರದೇಶದ ಸಿರೋರ್‌ ಅರಣ್ಯ ಪ್ರದೇಶದಲ್ಲಿತ್ತು. ಮತ್ತೆ ಎರಡು ಬಾರಿ ಭೂಮಿ ಕಂಪಿಸಿತು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ತಿಳಿಸಿದ್ದಾರೆ.

ಕಂಪನದಿಂದ ಮನೆಗಳು ಅದುರಿವೆ. ಆದರೆ ಯಾವುದೇ ಹಾನಿಯಾದ ವರದಿಯಾಗಿಲ್ಲ. ಜನರು ಭಯದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದು, ರಾತ್ರಿ ಹೊರಗಡೆಯೇ ಉಳಿಯುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT