ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘನೆ; ಬಿಜೆಪಿಯ ಮೂವರು ಶಾಸಕರ ಬಂಧನ

Last Updated 16 ಮೇ 2021, 9:41 IST
ಅಕ್ಷರ ಗಾತ್ರ

ಸಿಲಿಗುರಿ: ‘ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಆರೋಪದಡಿಬಿಜೆಪಿಯ ಮೂವರು ಶಾಸಕರನ್ನು ಭಾನುವಾರ ಬಂಧಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಉತ್ತರ ಬಂಗಾಳದಲ್ಲಿ ಕೋವಿಡ್‌ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಲ್ಲಿ ಕೊರತೆಯಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಶಂಕರ್‌ ಘೋಶ್‌, ಆನಂದಮೊಯಿ ಬರ್ಮನ್‌ ಮತ್ತು ಶಿಖಾ ಚಟ್ಟೋಪಾಧ್ಯಾಯ ಅವರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಯಿತು. ಬಳಿಕ ಬಿಡುಗಡೆಗೊಳಿಸಲಾಯಿತು ಎಂದು ಅವರು ತಿಳಿಸಿದರು.

‘ಸಫ್ದರ್‌ ಹಶ್ಮಿ ಚೌಕ್‌ನಲ್ಲಿ ನಾವು ಧರಣಿಗೆ ಕುಳಿತಿದೆವು. ಈ ವೇಳೆ ಎಲ್ಲಾ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಿದ್ದೆವು. ಅಲ್ಲದೆ ಅಲ್ಲಿ ಯಾರೊಬ್ಬರು ಇರಲಿಲ್ಲ’ ಎಂದು ಶಾಸಕರು ಹೇಳಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ನಾಯಕ ಗೌತಮ್‌ ಅವರು, ಬಿಜೆಪಿ ಶಾಸಕರು ಪ್ರತಿಭಟಿಸುವ ಮೂಲಕ ಜನರಿಗೆ ದ್ರೋಹ ಮಾಡಿದ್ದಾರೆ. ಜನರಿಗೆ ಬಿಜೆಪಿ ನಾಯಕರ ನಿಜ ಮುಖ ತಿಳಿಯಬೇಕು. ಇವರಿಗೆ ಸೋಂಕು ಪ್ರಸರಣದ ಬಗ್ಗೆ ಯಾವುದೇ ಕಾಳಜಿ ಇಲ್ಲ. ಈ ಬಿಕ್ಕಟ್ಟಿನ ಸಮಯವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಕೋವಿಡ್‌ ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದರು.

ಪಶ್ಚಿಮ ಬಂಗಾಳದಲ್ಲಿ ಭಾನುವಾರದಿಂದ 15 ದಿನಗಳ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT