ಭಾನುವಾರ, ಏಪ್ರಿಲ್ 18, 2021
33 °C

ಒಂದೇ ಕುಟುಂಬದ ಮೂವರು ಮಕ್ಕಳು ಕೊಳದಲ್ಲಿ ಮುಳುಗಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ರಾಮಗಡ: ಕೊಳವೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ರಾಮಗಡ ಜಿಲ್ಲೆಯಲ್ಲಿ ನಡೆದಿದೆ.

‘ಶನಿವಾರ ಮಗನ್‌ಪುರ ಗ್ರಾಮದ ಕೊಳದ ಬಳಿ ಮೂವರು ಮಕ್ಕಳು ಆಟವಾಡುತ್ತಿದ್ದರು. ಇದರಲ್ಲಿ ಒಬ್ಬ ಕೈತೊಳೆಯಲು ಎಂದು ಕೊಳದ ಬಳಿ ಹೋದಾಗ ಕಾಲು ಜಾರಿ ಬಿದ್ದಿದ್ದಾನೆ. ಅವನನ್ನು ರಕ್ಷಿಸಲು ಮತ್ತಿಬ್ಬರು ಮಕ್ಕಳು ಕೊಳಕ್ಕೆ ಹಾರಿದ್ದಾರೆ. ಆದರೆ ಅವರು ಕೂಡ ನೀರಿನಲ್ಲಿ ಮುಳುಗಿದ್ದಾರೆ’ ಎಂದು ಗೋಲಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅಜಯ್‌ ಕುಮಾರ್‌ ರಾಜಕ್ ಅವರು ತಿಳಿಸಿದರು.

‘ಸ್ಥಳೀಯರು ಮಕ್ಕಳ ಶವಗಳನ್ನು ಹೊರ ತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಮತ್ತು ತನಿಖೆಯನ್ನು ಆರಂಭಿಸಲಾಗಿದೆ’ ಎಂದು ಗೋಲಾ ಪೊಲೀಸ್‌ ಠಾಣೆ ಅವದೇಶ್‌ ಕುಮಾರ್‌ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು