ಭಾನುವಾರ, ಆಗಸ್ಟ್ 14, 2022
20 °C

ಒಡಿಶಾದಲ್ಲಿ ನಕ್ಸಲರ ದಾಳಿ: ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ನಕ್ಸಲರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್‌ನ ಮೂವರು ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಒಡಿಶಾದ ನೌಪಾದ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ ಒಬ್ಬ ಜವಾನ್ ಮತ್ತು ಇಬ್ಬರು ಸಹಾಯಕ ಸಬ್‌–ಇನ್ಸ್‌ಪೆಕ್ಟರ್ ಶ್ರೇಣಿಯ ಸಿಬ್ಬಂದಿ ಮೃತಪಟ್ಟಿದ್ದಾರೆ.

ರಸ್ತೆ ತೆರವು ಕಾರ್ಯದಲ್ಲಿ ತೊಡಗಿದ್ದ ಸಿಆರ್‌ಪಿಎಫ್‌ ತಂಡದ ಮೇಲೆ ಸುಧಾರಿತ ಮತ್ತು ಕಚ್ಚಾ ಗ್ರೆನೆಡ್ ಲಾಂಚರ್‌ಗಳ ಮೂಲಕ ನಕ್ಸಲರು ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು