ಶುಕ್ರವಾರ, ಜನವರಿ 28, 2022
24 °C

ಆಂಧ್ರದ ಕಡಪಾ ಜಿಲ್ಲೆಯಲ್ಲಿ ಪ್ರವಾಹ: ಮೂವರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಉಂಟಾಗಿರುವ ದಿಢೀರ್‌ ಪ್ರವಾಹಕ್ಕೆ ಸಿಲುಕಿ ಶುಕ್ರವಾರ ಮೂವರು ಮೃತಪಟ್ಟಿದ್ದು, ಹಲವರು ಕೊಚ್ಚಿ ಹೋಗಿದ್ದಾರೆ.

ಅನ್ನಮಯ್ಯ ಯೋಜನೆಯಡಿ ಚೆಯ್ಯೆರು ನದಿಗೆ ನಿರ್ಮಿಸಲಾಗಿದ್ದ ತಡೆಗೋಡೆ ಒಡೆದ ಪರಿಣಾಮ ದಿಢೀರನೆ ಪ್ರವಾಹ ಉಂಟಾಯಿತು. ಇದರಿಂದ ನದಿ ಪಾತ್ರದ ಕೆಲ ಗ್ರಾಮಗಳಿಗೆ ನೀರು ನುಗ್ಗಿತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ರಾಜಂಪೇಟೆಯ ಶಿವನ ದೇವಸ್ಥಾನದಲ್ಲಿ ಕಾರ್ತಿಕ ಪೌರ್ಣಮಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತರ ಗುಂಪು  ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಬಳಿಕ ನಂದಲೂರು ಬಳಿ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಪತ್ತೆಗೆ ಹುಡುಕಾಟ ನಡೆದಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ  ಚಿತ್ತೂರು ಮತ್ತು ಕಡಪಾಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು