ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖನೌ: ಬಹುಮಹಡಿ ವಸತಿ ಕಟ್ಟಡ ಕುಸಿದು ಮೂವರ ಸಾವು

ಭೂಕಂಪನದ ಶಂಕೆ
Last Updated 24 ಜನವರಿ 2023, 15:42 IST
ಅಕ್ಷರ ಗಾತ್ರ

ಲಖನೌ: ಇಲ್ಲಿನ ಹಜರತ್‌ ಗಂಜ್‌ನಲ್ಲಿ ಮಂಗಳವಾರ ಬಹುಮಹಡಿ ವಸತಿ ಕಟ್ಟಡವೊಂದು ಕುಸಿದುಬಿದ್ದು, ಕನಿಷ್ಠ ಮೂವರು ಸಾವಿಗೀಡಾಗಿದ್ದಾರೆ. ಇತರ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್‌–ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಾ ಬಂದಿದ್ದಾರೆ. ಇದುವರೆಗೆ ಮೂವರ ಮೃತದೇಹಗಳು ಪತ್ತೆಯಾಗಿವೆ’ ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

‘ವಜೀರ್ ಹಸನ್ ರಸ್ತೆಯಲ್ಲಿನ ಕಟ್ಟಡ ಕುಸಿತವು ಭೂಕಂಪದಿಂದ ಸಂಭವಿಸಿದೆಯೇ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ, ‘ಈಗಲೇ ಏನನ್ನೂ ಹೇಳಲಾಗುವುದಿಲ್ಲ’ ಎಂದು ಲಖನೌ ಜಿಲ್ಲಾಧಿಕಾರಿ ಸೂರ್ಯಪಾಲ್ ಗಂಗ್ವಾರ್ ಉತ್ತರಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸಾಸೌಲಭ್ಯ ಕಲ್ಪಿಸುವಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT