ಶನಿವಾರ, ಮೇ 28, 2022
31 °C

ಮಂಗಳೂರು–ಚೆನ್ನೈ ರೈಲಿಗೆ ಸಿಲುಕಿ ಹೆಣ್ಣಾನೆ, ಎರಡು ಮರಿಯಾನೆ ದುರಂತ ಸಾವು!

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.

ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಪೂಜಾ ವಿಧಿ ವಿಧಾನಗಳೊಂದಿಗೆ ಘೇಂಡಾಮೃಗಗಳ ಕೊಂಬು ದಹಿಸಿದ ಅಸ್ಸಾಂ ಸರ್ಕಾರ!

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು