ಮಂಗಳವಾರ, ಮೇ 11, 2021
20 °C
ಎಸ್‌ಟಿಎಫ್, ಕಾನ್ಪುರ ಪೊಲೀಸ್ ಜಂಟಿ ಕಾರ್ಯಾಚರಣೆ

ಉತ್ತರ ಪ್ರದೇಶ: ಅಕ್ರಮವಾಗಿ ರೆಮ್‌ಡಿಸಿವಿರ್‌ ಚುಚ್ಚುಮದ್ದು ಮಾರಾಟ; ಮೂವರ ಬಂಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕಾನ್ಪುರ: ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಪ್ರತಿನಿಧಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‌

ಬಂಧಿತರನ್ನು ಪ್ರಶಾಂತ್ ಶುಕ್ಲಾ ಮತ್ತು ನೌಬಸ್ತಾ ನಿವಾಸಿ ಮೋಹನ್ ಸೋನಿ ಮತ್ತು ಹರಿಯಾಣದ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 265 ಶೀಷೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆಯ(ಎಸ್‌ಟಿಎಫ್‌) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮೂವರು ಕಿಮ್ವಾಯ್ ನಗರದಲ್ಲಿ ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಎಸ್‌ಟಿಎಫ್ ಹೇಳಿಕೆಯಲ್ಲಿ ತಿಳಿಸಿದೆ. ಕಾನ್ಪುರ ಪೊಲೀಸರು ಮತ್ತು ಎಸ್‌ಟಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗುರುವಾರ ಈ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಂಧಿತರ ಬಳಿ ರೆಮ್‌ಡಿಸಿವಿರ್‌ ಚುಚ್ಚು ಮದ್ದುಗಳನ್ನು ಖರೀದಿಸಿದ್ದಕ್ಕೆ ಬಿಲ್ ಇರಲಿಲ್ಲ. ಹಾಗೆಯೇ, ವಶಪಡಿಸಿಕೊಂಡ ಶೀಷೆಗಳ ಮೇಲಿದ್ದ ಬ್ಯಾಚ್ ಸಂಖ್ಯೆ ಕಾಣೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಕಾಳಸಂತೆಯ ಜಾಲವನ್ನು ಪತ್ತೆ ಮಾಡಲು ಮೂವರ ಮೊಬೈಲ್‌ ಫೋನ್‌ ಕರೆಗಳ ವಿವರವನ್ನು ಸಂಗ್ರಹಿಸುತ್ತಿರುವುದಾಗಿ ಕಾನ್ಪುರದ ದಕ್ಷಿಣ ಉಪ ಪೊಲೀಸ್ ಆಯುಕ್ತ ರವೀನಾ ತ್ಯಾಗಿ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬಾಬುಪುರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು