ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಡಬಲ್‌ ಡೆಕ್ಕರ್ ಬಸ್ ಪಲ್ಟಿ; ಮೂವರ ಸಾವು, 30 ಜನರಿಗೆ ಗಾಯ

Last Updated 5 ಏಪ್ರಿಲ್ 2022, 7:42 IST
ಅಕ್ಷರ ಗಾತ್ರ

ಅಯೋಧ್ಯೆ: ಓವರ್‌ಟೇಕ್‌ ಮಾಡಲು ಯತ್ನಿಸುತ್ತಿದ್ದ ವೇಳೆ ಡಬಲ್‌ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಲಖನೌ-ಗೋರಖ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಿಂದ ಬರುತ್ತಿದ್ದ ಖಾಸಗಿ ಬಸ್, ಮುಮ್ತಾಜ್ ನಗರ ಪ್ರದೇಶದ ಹೆದ್ದಾರಿಯಲ್ಲಿ ಮುಂಜಾನೆ 7 ಗಂಟೆ ಸುಮಾರಿಗೆ ಪಲ್ಟಿ ಹೊಡೆದಿದೆ ಎಂದು ತಿಳಿಸಿದ್ದಾರೆ.

ಎಲ್ಲ ಗಾಯಾಳುಗಳನ್ನು ಫೈಜಾಬಾದ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 12 ಜನರನ್ನು ದಾಖಲಿಸಲಾಗಿದ್ದು, ಇನ್ನುಳಿದವರು ಪ್ರಾಥಮಿಕ ಚಿಕಿತ್ಸೆ ಪಡೆದು ಮರಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಒಬ್ಬರನ್ನು ಸಿದ್ಧಾರ್ಥನಗರದ ರಮೇಶ್ (35) ಎಂದು ಗುರುತಿಸಲಾಗಿದ್ದು, ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. ಅವರ ಗುರುತು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಕಂಟೋನ್‌ಮೆಂಟ್ ಪೊಲೀಸ್ ಠಾಣೆಯ ಎಸ್ಎಚ್ಒ ಅರುಣ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಗತ್ಯ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT