ಹರಿಯಾಣ: ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ಟ್ರಕ್- ಮೂವರ ಸಾವು

ಗುರುಗ್ರಾಮ: ಕಲ್ಲಿದ್ದಲು ತುಂಬಿದ್ದ ಟ್ರಕ್ ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಝಜ್ಜಾರ್ ಜಿಲ್ಲೆಯ ಕುಂಡ್ಲಿ–ಮನೇಸರ್–ಪಲ್ವಾಲ್ ಎಕ್ಸ್ಪ್ರೆಸ್ ವೇ, ಆಸೋಡಾ ಟೋಲ್ ಪ್ಲಾಜಾ ಬಳಿ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ರೊಹ್ಟಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದಾಗ 18 ಮಂದಿ ರಸ್ತೆ ಬದಿ ಮಲಗಿದ್ದರು. ನಾಲ್ವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರನ್ನು ರಸ್ತೆ ರಿಪೇರಿ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಡಿಸಿಪಿ ಶಕ್ತಿ ಸಿಂಗ್ ಹೇಳಿದ್ದಾರೆ.
ಮಲಗಲು ಜಾಗಕ್ಕಾಗಿ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ರಭಸದಿಂದ ಡಿಕ್ಕಿ ಹೊಡೆದ ಟ್ರಕ್, ಮಲಗಿದ್ದವರ ಮೇಲೂ ಹರಿದಿದೆ.
ಇದನ್ನೂ ಓದಿ.. ವಿಶ್ವದ ಹಲವೆಡೆ ಮಂಕಿಪಾಕ್ಸ್ ಆತಂಕ: ಅಮೆರಿಕದಲ್ಲಿ 1, ಪೋರ್ಚುಗಲ್ನಲ್ಲಿ 5 ಪ್ರಕರಣ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.