ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಅಗ್ನಿ ಅವಘಡ: ಮೂವರ ಸಾವು

Last Updated 3 ಅಕ್ಟೋಬರ್ 2022, 6:37 IST
ಅಕ್ಷರ ಗಾತ್ರ

ಭದೋಹಿ(ಉತ್ತರ ಪ್ರದೇಶ): ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 3 ಮಂದಿ ಮೃತಪಟ್ಟು, 64 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಾಲೊಜೆನ್ ಲೈಟ್ ಹೆಚ್ಚು ಬಿಸಿಯಾದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಔರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ನರ್ಥುವಾ ಹಳ್ಳಿಯ ದುರ್ಗಾ ಪೂಜೆಯ ಪೆಂಡಾಲ್‌ನಲ್ಲಿ ಭಾನುವಾರ ರಾತ್ರಿ ನಡೆಯುತ್ತಿದ್ದ ಡಿಜಿಟಲ್ ಶೋ ನೋಡಲು 300–400 ಮಂದಿ ಆಗಮಿಸಿದ್ದರು. ಈ ಸಂದರ್ಭ ಘಟನೆ ನಡೆದಿದೆ.

ಅಗ್ನಿ ಆಕಸ್ಮಿಕದಲ್ಲಿ ಒಟ್ಟು 67 ಮಂದಿ ಗಾಯಗೊಂಡಿದ್ದು, ಅದರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಮತ್ತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಗೊಂಡವರಲ್ಲಿ ಹೆಚ್ಚಿನ ಮಂದಿ ಮಹಿಳೆಯರು ಮತ್ತು ಮಕ್ಕಳು. ಅವಘಡ ಕುರಿತಂತೆ ತನಿಖೆ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ.

ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT