ಜಮ್ಮು–ಕಾಶ್ಮೀರ: ಲಷ್ಕರ್–ಎ–ತಯಬಾ ಸಂಘಟನೆಯ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಂ ಜಿಲ್ಲೆಯ ಚಿಮ್ಮರ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ಬುಧವಾರ ತಡರಾತ್ರಿ 2.30ರ ವೇಳೆಗೆ ಈ ಪ್ರದೇಶವನ್ನು ಸಿಬ್ಬಂದಿ ಸುತ್ತುವರಿದಿದ್ದರು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದಾಗ, ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
'ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಶವಗಳನ್ನು ಹಿಂಪಡೆಯಲಾಗಿದೆ. ಉಗ್ರರನ್ನು ಕುಲ್ಗಾಂ ನಿವಾಸಿ ವಸೀಮ್ ಅಹ್ಮದ್ ಬಂಗ್ರೂ, ಶೋಪಿಯಾನ್ ನಿವಾಸಿ ಶಹನಾವಾಜ್ ಅಹ್ಮದ್ ಮತ್ತು ಚಿಮ್ಮರ್ ನಿವಾಸಿ ಜಾಕಿರ್ ಬಶೀರ್ ಎಂದು ಗುರುತಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.