ಬುಧವಾರ, ಸೆಪ್ಟೆಂಬರ್ 28, 2022
26 °C

DNP ಜಮ್ಮು ಮತ್ತು ಕಾಶ್ಮೀರ: ಮೂವರು ಎಲ್ಇಟಿ ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಬಡ್ಗಾಂ ಜಿಲ್ಲೆಯಲ್ಲಿ, ರಾಹುಲ್‌ ಭಟ್‌ ಹಾಗೂ ಟಿ.ವಿ. ಕಲಾವಿದೆ ಅಮ್ರೀನ್‌ ಭಟ್‌ ಅವರ ಹತ್ಯೆಗೆ ಕಾರಣವಾಗಿದ್ದ ಲಷ್ಕರ್‌–ಎ–ತಯಬಾ ಸಂಘಟನೆಯ ಭಯೋತ್ಪಾದಕ ಲತೀಫ್‌ ರಾಥರ್‌ ಸೇರಿದಂತೆ ಮೂವರು ಉಗ್ರರು ಬುಧವಾರ ಎಕ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

‘ಬಡ್ಗಾಂನ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಈ ವೇಳೆ ಉಗ್ರರು ಪಡೆಗಳ ಮೇಲೆ ಗುಂಡು ಹಾರಿಸಿದ್ದರಿಂದ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿತು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.