ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಎನ್‌ಕೌಂಟರ್‌: ಮೂವರು ಮಾವೋವಾದಿಗಳು ಹತ

Last Updated 22 ನವೆಂಬರ್ 2020, 5:34 IST
ಅಕ್ಷರ ಗಾತ್ರ

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯ ಬರಾಚಟ್ಟಿ ಅರಣ್ಯ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಮಾವೋವಾದಿಗಳು ಮೃತ‍ಪಟ್ಟಿದ್ದು, ಅವರ ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಘಟನಾ ಸ್ಥಳದಿಂದ ಎ.ಕೆ ಸರಣಿಯ ರೈಫಲ್‌ಗಳು ಮತ್ತು ಐಎನ್‌ಎಸ್‌ಎಎಸ್‌ ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಬ್ರಾ 205ನೇ ಬೆಟಾಲಿಯನ್‌ ನೇತೃತ್ವದಲ್ಲಿ ಎನ್‌ಕೌಂಟರ್‌ ನಡೆಸಲಾಗಿದ್ದು, ತಂಡದಲ್ಲಿ ರಾಜ್ಯ ಪೊಲೀಸ್‌ ಸಿಬ್ಬಂದಿ ಕೂಡ ಇದ್ದರು ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT