ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ: ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿ ಮೂವರು ನಕ್ಸಲರ ಹತ್ಯೆ

Last Updated 26 ನವೆಂಬರ್ 2022, 4:45 IST
ಅಕ್ಷರ ಗಾತ್ರ

ಬಿಜಾಪುರ, ಛತ್ತೀಸಗಡ: ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಭದ್ರತಾ ಪಡೆ ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿದೆ.

ಮಿರ್‌ತುರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಸುಮಾರು 7.30ಕ್ಕೆ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಐಜಿಪಿ ಸುಂದರ್‌ ರಾಜ್‌ ಪಿ ತಿಳಿಸಿದರು.

ಕಾರ್ಯಾಚರಣೆ ಮುಗಿದ ಬಳಿಕ ಘಟನಾ ಸ್ಥಳದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳು ಸಿಕ್ಕಿವೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸುಂದರ್‌ ರಾಜ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT