ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಕಾಳಗ: ಮೂವರು ಮಾವೋವಾದಿಗಳ ಹತ್ಯೆ

Last Updated 25 ಅಕ್ಟೋಬರ್ 2021, 9:31 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣ–ಛತ್ತೀಸಗಡ ಗಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ತೆಲಂಗಾಣದ ಮುಲುಗು ಜಿಲ್ಲೆ ಮತ್ತು ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದ ಗುಂಡಿನ ಕಾಳಗದಲ್ಲಿ ಹತ್ಯೆಯಾದ ಮೂವರು ಮಾವೋವಾದಿಗಳ ಶವಗಳು, ಎಕೆ–47 ಬಂದೂಕುಗಳು ಸೇರಿದಂತೆ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಇದು ಎರಡೂ ರಾಜ್ಯಗಳ ಪೊಲೀಸರು ಮತ್ತು ಸಿಆರ್‌ಪಿಎಫ್‌ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿತ್ತು ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT