ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್: ನಾಲ್ವರು ಉಗ್ರರ ಸಾವು

Last Updated 22 ಮಾರ್ಚ್ 2021, 5:27 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

‘ಶೋಪಿಯಾನ್ ಜಿಲ್ಲೆಯ ಮನಿಹಾಲಾದಲ್ಲಿ ಉಗ್ರರುಇರುವುದನ್ನು ಅರಿತ ಭದ್ರತಾ ಪಡೆಯ ಯೋಧರು ಶೋಧ ಕಾರ್ಯಾಚರಣೆ ಆರಂಭಿಸಿದರು. ಉಗ್ರರು ಮೊದಲು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಯೋಧರು ಗುಂಡು ಹಾರಿಸಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಈ ವೇಳೆ ಭದ್ರತಾ ಪಡೆಯ ಯೋಧರು ಅವರಿಗೆ ಶರಣಾಗುವಂತೆ ಹೇಳಿದರು. ಆದರೆ, ಇದಕ್ಕೆ ಒಪ್ಪದ ಉಗ್ರರು ಗುಂಡಿನ ಚಕಮಕಿ ಮುಂದುವರಿಸಿದರು. ಇದರಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT