ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ನ ಮೂವರು ಶಾಸಕರಲ್ಲಿ ಭಾರಿ ನಗದು ಪತ್ತೆ

Last Updated 30 ಜುಲೈ 2022, 22:51 IST
ಅಕ್ಷರ ಗಾತ್ರ

ಹೌರಾ: ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರನ್ನು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಪೊಲೀಸರು ಶನಿವಾರ ರಾತ್ರಿ ತಡೆದು ನಿಲ್ಲಿಸಿದ್ದಾರೆ. ಅವರು ಸಂಚರಿಸುತ್ತಿದ್ದ ವಾಹನದಲ್ಲಿ ಭಾರಿ ಮೊತ್ತದ ಹಣ ಸಿಕ್ಕ ಕಾರಣಕ್ಕೆ ಅವರನ್ನು ತಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕರಾದ ಇರ್ಫಾನ್‌ ಅನ್ಸಾರಿ, ರಾಜೇಶ್‌ ಕಚ್ಚಪ್‌ ಮತ್ತು ನಮನ್‌ ಬಿಕ್ಸಲ್‌ ಕೊಂಗರಿ ಅವರು ಸಂಚರಿಸುತ್ತಿದ್ದ ವಾಹನದಲ್ಲಿ ಭಾರಿ ಮೊತ್ತದ ಹಣ ಇದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹಾಗಾಗಿ, ರಾಷ್ಟ್ರೀಯ ಹೆದ್ದಾರಿ 16ರ ರಾಣಿಹತಿ ಬಳಿ ತಡೆಯಲಾಗಿದೆ. ಎಣಿಕೆ ಯಂತ್ರಗಳನ್ನು ತಂದು ನೋಟುಗಳನ್ನು ಎಣಿಸಲಾಗುವುದು. ಹಣದ ಮೂಲದ ಬಗ್ಗೆ ಶಾಸಕರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT