ಭಾನುವಾರ, ಮೇ 22, 2022
22 °C

ಪುದುಚೇರಿಯ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ: ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

Congress

ಪುದುಚೇರಿ: ಪುದುಚೇರಿಯ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ. ವಿ.ನಾರಾಯಣಸ್ವಾಮಿ ಸರ್ಕಾರಕ್ಕೆ ವಿಶ್ವಾಸಮತ ಯಾಚನೆ ವೇಳೆ ಸೋಲಾಗಲಿದೆ ಎಂದು ಬಿಜೆಪಿ ನಾಯಕ ನಿರ್ಮಲ್ ಕುಮಾರ್ ಸುರಾನ ಹೇಳಿದ್ದಾರೆ.

ಈಗಾಗಲೇ ರಾಜೀನಾಮೆ ನೀಡಿರುವ ನಾಲ್ವರು ಶಾಸಕರ ಪೈಕಿ ಎ.ನಮಶಿವಾಯಂ ಹಾಗೂ ಇ ಥೀಪ್ಪೈನ್‌ತಾನ್ ಈಗಾಗಲೇ ಬಿಜೆಪಿ ಸೇರಿದ್ದಾರೆ.

ಓದಿ: ಪುದುಚೇರಿ: ಫೆ.22ರಂದು ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ನೂತನ ಗವರ್ನರ್‌ ಆದೇಶ

ಇನ್ನಿಬ್ಬರು ಕಾಂಗ್ರೆಸ್ ಶಾಸಕರಾದ ಮಲ್ಲಾಡಿ ಕೃಷ್ಣ ರಾವ್ ಮತ್ತು ಎ. ಜಾನ್ ಕುಮಾರ್ ಸಹ ಬಿಜೆಪಿ ಸೇಲಿದ್ದಾರೆ. ಅವರು ನಮ್ಮ ನಾಯಕರೊಂದಿಗೆ ಮಾತುಕತೆಯಲ್ಲಿದ್ದಾರೆ ಎಂದು ಸುರಾನ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ವಿಶ್ವಾಸಮತ ಯಾಚನೆ ವೇಳೆ ಸೋಲಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಂಡಿತವಾಗಿಯೂ, ಶೇ 100ರಷ್ಟು ಕಾಂಗ್ರೆಸ್‌ ಸರ್ಕಾರ ಸೋಲುವುದು ಖಚಿತ’ ಎಂದು ಹೇಳಿದ್ದಾರೆ.

ಫೆ. 22ರಂದು ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಡಾ. ತಮಿಳಿಸೈ ಸೌಂದರರಾಜನ್ ಅವರು ನಾರಾಯಣಸ್ವಾಮಿ ಸರ್ಕಾರಕ್ಕೆ ಈಗಾಗಲೇ ಸೂಚಿಸಿದ್ದಾರೆ.

ಓದಿ: ಆಳ-ಅಗಲ: ಬಿಜೆಪಿ ತಮಿಳುನಾಡು ಪ್ರವೇಶಕ್ಕೆ ಪುದುಚೇರಿ ದಾರಿ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಲಿರುವ ಮೂವರು ಶಾಸಕರ ಹೆಸರು ಬಹಿರಂಗಪಡಿಸಲು ಸುರಾನ ನಿರಾಕರಿಸಿದ್ದಾರೆ.

‘ಯಾರು ಎಂಬ ಬಗ್ಗೆ ನಾನೀಗ ಮಾತನಾಡಲಾರೆ. ಅವರು ನಾರಾಯಣಸ್ವಾಮಿ ಬಗ್ಗೆ ಅಸಮಾಧಾನ ಹೊಂದಿದ್ದು, ರಾಜೀನಾಮೆ ನೀಡಲು ಬಯಸಿದ್ದಾರೆ. ಅವರು ರಾಜೀನಾಮೆ ನೀಡುವುದು ಶೇ 100ರಷ್ಟು ನಿಜವಾಗಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು