ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಇಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿ ಮೂವರಿಗೆ ಓಮೈಕ್ರಾನ್

Last Updated 27 ಡಿಸೆಂಬರ್ 2021, 1:45 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ಮತ್ತೆ ಮೂವರಲ್ಲಿ ಓಮೈಕ್ರಾನ್ ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಯಿಂದ ಸೋಂಕಿತರಾದವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕಿತರ ಪೈಕಿ ಇಬ್ಬರು ವಿದೇಶದಿಂದ ಬಂದಿದ್ದಾರೆ ಮತ್ತು ಮತ್ತೊಬ್ಬರು ಅವರ ಸಂಪರ್ಕಕ್ಕೆ ಬಂದಿದ್ದರು.

ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ 248 ಪ್ರಯಾಣಿಕರು ವಿದೇಶಗಳಿಂದ ಬಂದಿಳಿದಿದ್ದರು. ಇವರಲ್ಲಿ ಇಬ್ಬರಿಗೆ ಕೋವಿಡ್-19 ದೃಢಪಟ್ಟಿದೆ.

ಸೋಂಕಿತರಿಬ್ಬರು ಸೇರಿ 16 ಜನರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಆರೋಗ್ಯ ಬುಲೆಟಿನ್ ಮಾಹಿತಿ ನೀಡಿದೆ.

ಡಿಸೆಂಬರ್ 1ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11.493 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 85 ಜನರಿಗೆ ಕೋವಿಡ್ ದೃಢಪಟ್ಟಿತ್ತು ಮತ್ತು ಇವರಲ್ಲಿ 45 ಜನರಲ್ಲಿ ಓಮೈಕ್ರಾನ್ ಪತ್ತೆಯಾಗಿತ್ತು. ಸದ್ಯ 10 ಜನರು ಚೇತರಿಸಿಕೊಂಡಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT