ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ದಕ್ಷಿಣ ಭಾರತಕ್ಕೆ ಇನ್ನೂ ಮೂರು ವಂದೇ ಭಾರತ್ ರೈಲುಗಳನ್ನು ಪರಿಚಯಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣದ ಕಾಚಿಗುಡಾದಿಂದ ಕರ್ನಾಟಕದ ರಾಜಧಾನಿ ಬೆಂಗಳೂರು, ತೆಲಂಗಾಣದ ಸಿಕಂದರಾಬಾದ್‌ನಿಂದ ಆಂಧ್ರಪ್ರದೇಶದ ತಿರುಪತಿ ಹಾಗೂ ಮಹಾರಾಷ್ಟ್ರದ ಪುಣೆ ಮಾರ್ಗಕ್ಕೆ ಹೊಸ ರೈಲುಗಳು ಬರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ವರ್ಷ ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಂಧ್ರಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ಇದೆ.
ಅಲ್ಲದೆ, ‘ಸೌತ್ ಮಿಶನ್’ಅಡಿ ಮುಂದಿನ ವರ್ಷದ ಲೋಕಸಭಾ ಚುನಾವಣೆ ದೃಷ್ಟಿಯಿಂದ ಇಲ್ಲಿನ ರಾಜ್ಯಗಳತ್ತ ಬಿಜೆಪಿ ಗಮನ ಕೇಂದ್ರೀಕರಿಸಿದೆ.
2022ರ ನವೆಂಬರ್‌ನಲ್ಲಿ ಚೆನ್ನೈ–ಬೆಂಗಳೂರು–ಮೈಸೂರು ನಡುವೆ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಸಿಕ್ಕಿತ್ತು.
ಸ್ವತಃ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಿದ್ದರು.
ಇತ್ತೀಚೆಗೆ ಉದ್ಘಾಟನೆಯಾದ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವಿನ ರೈಲು ಚಾಲನೆ ಆರಂಭಿಸಿದಾಗಿನಿಂದ ನೂರಷ್ಟು ನೂರರಷ್ಟು ಆಸನ ಭರ್ತಿಯೊಂದಿಗೆ ಸಂಚರಿಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.