ಮಂಗಳವಾರ, ಆಗಸ್ಟ್ 3, 2021
23 °C

ಕೇರಳದ ಮೂವರಲ್ಲಿ ಝಿಕಾ ವೈರಾಣು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಕೇರಳದಲ್ಲಿ ಮತ್ತೆ ಮೂವರು ವ್ಯಕ್ತಿಗಳಲ್ಲಿ ಝಿಕಾ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಈ ವೈರಸ್‌ಗೆ ಸೋಂಕಿತರಾದವರ ಸಂಖ್ಯೆ 18ಕ್ಕೆ ಏರಿದೆ.

ಭಾನುವಾರ ಸೋಂಕಿತರಾದವರಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವೂ ಸೇರಿದೆ. ಎಲ್ಲ ಸೋಂಕಿತರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ. ಬಹುತೇಕ ಸೋಂಕಿತರು ನಗರದ ಖಾಸಗಿ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಝಿಕಾ ವೈರಸ್‌ನಿಂದ ಉಂಟಾದ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಕೇಂದ್ರ ಸರ್ಕಾರದ ತಂಡ ಕೇರಳಕ್ಕೆ ಭೇಟಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು