ಗುರುವಾರ , ಜನವರಿ 20, 2022
15 °C

ಅರುಣಾಚಲ ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ; ಮಣಿಪುರ ದಾಳಿಗೆ ಪ್ರತಿಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಇಟಾನಗರ: ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್‌ನ (ಖಪ್ಲಾಂಗ್) ಪ್ರತ್ಯೇಕತಾವಾದಿ ಸಂಘಟನೆಯ ಮೂವರು ಉಗ್ರರನ್ನು ಅಸ್ಸಾಂ ರೈಫಲ್ಸ್‌ ಯೋಧರು ಸೋಮವಾರ ಗುಂಡಿಕ್ಕಿ ಕೊಂದಿದ್ದಾರೆ.

ಮಣಿಪುರದಲ್ಲಿ ಶನಿವಾರ ಉಗ್ರರು ನಡೆಸಿದ ದಾಳಿಯಲ್ಲಿ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮೃತಪಟ್ಟಿದ್ದರು. ಉಗ್ರರ ಪತ್ತೆಗೆ ಕಾರ್ಯಾಚರಣೆ ಚುರುಕುಗೊಳಿಸಿದ್ದ ಯೋಧರು ಅರುಣಾಚಲ ಪ್ರದೇಶ ಲಾಂಗ್ಡಿಂಗ್‌ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಜಿಲ್ಲೆಯ ವಕ್ಕಾ ಸರ್ಕಲ್‌ನಲ್ಲಿರುವ ಖೋಗ್ಲಾ ಗ್ರಾಮದಲ್ಲಿ ಬೆಳಿಗ್ಗೆ 8 ಗಂಟೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಅಸ್ಸಾಂ ರೈಫಲ್ಸ್ (ಎಆರ್) ಯೋಧರು ಉಗ್ರರನ್ನು ಕೊಂದಿದ್ದಾರೆ. ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಲಾಂಗ್ಡಿಂಗ್ ಜಿಲ್ಲಾಧಿಕಾರಿ ಬಾನಿ ಲೆಗೊ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು