ಡೆಹ್ರಾಡೂನ್: ‘ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದಾಗಿ ತಾಯಿ–ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.

‘ಭಾನುವಾರ ರಾತ್ರಿ ಮಾಂಡವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಲ್ಲಿ ಮಾಧುರಿ ದೇವಿ(36), ರಿತು ದೇವಿ(32) ಮತ್ತು ಅವರ ಮೂರು ವರ್ಷದ ಪುತ್ರಿ ತ್ರಿಶ್ವಿ ಮೃತಪಟ್ಟಿದ್ದಾರೆ’ ಎಂದು ಉತ್ತರಕಾಶಿಯ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪತ್ವಾಲ್ ಅವರು ಹೇಳಿದರು.

‘ನೆರೆಯ ಕಂಕಾರಿ ಗ್ರಾಮದಲ್ಲೂ ಮೇಘ ಸ್ಪೋಟದಿಂದಾಗಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಪೀಡಿತ ಪ್ರದೇಶಗಳಲ್ಲಿ ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಾಗಲೇ ಕೊಳೆಗೇರಿಗಳಲ್ಲಿ ಸಿಲುಕಿರುವ ಹೆಚ್ಚಿನ ಜನರನ್ನು ರಕ್ಷಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಈ ಘಟನೆಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿರುವ ಮುಖ್ಯಮಂತ್ರಿ ಪುಷ್ಕರ್‌ಸಿಂಗ್ ಧಾಮಿ ಅವರು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಉತ್ತರಕಾಶಿ ಜಿಲ್ಲಾಧಿಕಾರಿಗೆ ಸೂಚಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.