ಗೋವಾ: ಬ್ರಿಟನ್‌ನಿಂದ ಹಿಂದಿರುಗಿದ ಮೂವರಿಗೆ ಕೋವಿಡ್-19, ಓಮೈಕ್ರಾನ್ ಆತಂಕ

ಪಣಜಿ: ಬ್ರಿಟನ್‌ನಿಂದ ಗೋವಾಗೆ ಹಿಂತಿರುಗಿದ್ದ ಮೂವರು ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇವರೆಲ್ಲರಿಂದ ಸಂಗ್ರಹಿಸಿರುವ ಮಾದರಿಯನ್ನು ವೈರಾಣು ವಂಶವಾಹಿ ಸಂರಚನೆ ವಿಶ್ಲೇಷಣೆಗೆ (ಜೀನೋಮ್ ಸೀಕ್ವೆನ್ಸಿಂಗ್) ಕಳುಹಿಸಲಾಗಿದೆ ಎಂದು ಗೋವಾದ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಈ ಕುರಿತು ಆರೋಗ್ಯ ಸಚಿವರಾದ ವಿಶ್ವಜಿತ್ ರಾಣೆ ಟ್ವೀಟ್ ಮಾಡಿದ್ದು, ಬ್ರಿಟನ್‌ನಿಂದ ಮುಂಜಾನೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಗೆ ಕೋವಿಡ್-19 ದೃಢಪಟ್ಟಿದೆ. ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ' ಎಂದು ತಿಳಿಸಿದ್ದಾರೆ.
ಈ ಮೂವರು ಪ್ರಯಾಣಿಕರು ಸರ್ಕಾರದ 101ನೇ ವಂದೇ ಭಾರತ್ ಮಿಷನ್ ಅಡಿಯಲ್ಲಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ರಾಜ್ಯಕ್ಕೆ ಬಂದಿದ್ದರು ಎಂದು ಗೋವಾ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಓಮೈಕ್ರಾನ್: ಮತ್ತಷ್ಟು ಮುನ್ನೆಚ್ಚರಿಕೆ ಅಗತ್ಯ
ವಿಮಾನದಲ್ಲಿ ಒಟ್ಟಾರೆ ಎಷ್ಟು ಪ್ರಯಾಣಿಕರಿದ್ದರು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.