ಭಾನುವಾರ, ನವೆಂಬರ್ 29, 2020
23 °C

ಕದನ ವಿರಾಮ ಉಲ್ಲಂಘನೆ: ಪಾಕ್‌ ಸೇನೆಯಿಂದ ಅಪ್ರಚೋದಿತ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಹಳ್ಳಿಗಳು ಮತ್ತು ಸೇನಾ ಠಾಣೆಗಳನ್ನು ಗುರಿಯಾಗಿಸಿಕೊಂಡು ಮಂಗಳವಾರ ಶೆಲ್‌ ದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಪೂಂಚ್‌ ಜಿಲ್ಲೆಯ ಶಹಪುರ್, ಕಿರಣಿ ಮತ್ತು ಕಾಸ್ಬಾ ವಲಯಗಳಲ್ಲಿ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪಾಕಿಸ್ತಾನ ಸೇನೆಯು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ರಕ್ಷಣಾ ಇಲಾಖೆ ವಕ್ತಾರ ಮಾಹಿತಿ ನೀಡಿದರು.

ಈ ವರ್ಷ ಅಕ್ಟೋಬರ್‌ ತಿಂಗಳಿನವರೆಗೆ ಪಾಕಿಸ್ತಾನಿ ಸೇನೆಯು ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿ ಬಳಿ ಒಟ್ಟು 3589 ಬಾರಿ ಕದನ ವಿರಾಮ ಉಲ್ಲಂಘಿಸಿದೆ. 2019ರಲ್ಲಿ 3168 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು ಎಂದು ಅಧಿಕೃತ ಮೂಲಗಳು ಹೇಳಿವೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು