ಮಂಗಳವಾರ, ಡಿಸೆಂಬರ್ 7, 2021
27 °C

ಜಮ್ಮು ಮತ್ತು ಕಾಶ್ಮೀರ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮಭಾಗ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

'ಶ್ರೀನಗರಲ್ಲಿ ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಲಾಗಿದೆ. ಎನ್‌ಕೌಂಟರ್‌ಗೆ ಬಲಿಯಾದ ಉಗ್ರರ ಗುರುತು ಮತ್ತು ಯಾವ ಸಂಘಟನೆ ಜೊತೆ ಸೇರಿಕೊಂಡಿದ್ದರು ಎಂಬುದು ಪತ್ತೆಯಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ನುಸುಳಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಪೊಲೀಸ್‌ ಪಡೆಯೊಂದಿಗೆ ಜಂಟಿ ಶೋಧ ಕಾರ್ಯಚರಣೆಗೆ ಇಳಿದಿತ್ತು. ಈ ಸಂದರ್ಭ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿತ್ತು.

ಅಡಗಿದ್ದ ಉಗ್ರರು ಪೊಲೀಸರತ್ತ ಗುಂಡಿನ ಮಳೆಗರೆದಿದ್ದು, ಎನ್‌ಕೌಂಟರ್‌ ಮೂಲಕ ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು