ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಾಗಿ ಬಳಸಲಾಗಿದ್ದ ಮೂರು ವಾಹನಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ.
ಅಮಾನತುಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಡಿವೈಎಸ್‌ಪಿ ದೇವೆಂದರ್ ಸಿಂಗ್ ಅವರಿಂದ ಫೆಬ್ರವರಿ 15ರಂದು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳುಳ್ಳ ವಾಹನವನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಧಾನ ಭಯೋತ್ಪಾದನಾ ತನಿಖಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ದಕ್ಷಿಣ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹುದ್ದೀನ್ ಉಗ್ರಗಾಮಿಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ಸಿಂಗ್ ಅವರನ್ನು ಜನವರಿ ತಿಂಗಳಲ್ಲಿ ಜಮ್ಮು–ಕಾಶ್ಮೀರ ಪೊಲೀಸರು ಬಂಧಿಸಿದ್ದರು. ನವೀದ್ ಬಾಬು ಎಂಬ ಭಯೋತ್ಪಾದಕನಿಗೆ ಆಶ್ರಯ ನೀಡಿದ್ದರು. ಎರಡು ಹುಂಡೈ ಕಾರು, ಒಂದು ಮಾರುತಿ ಕಾರನ್ನು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ಆರೋಪಿಗಳು ಬಳಸುತ್ತಿದ್ದರು ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.