ಶುಕ್ರವಾರ, ಮಾರ್ಚ್ 31, 2023
23 °C

ಕೋವಿಡ್‌ಗೆ ವರ್ಷ ಮೂರು ದೇಶದ 5.30 ಲಕ್ಷ ಜನ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಮಂಗಳವಾರ ಒಂದೇ ದಿನ ಕೋವಿಡ್‌ ಸೋಂಕಿನ 66 ಹೊಸ ಪ್ರಕರಣಗಳು ದಾಖಲಾಗಿವೆ. ಸದ್ಯ ದೇಶದಲ್ಲಿ 1,755 ಸಕ್ರಿಯ ಪ್ರಕರಣಗಳಿವೆ.

ಮೂರು ವರ್ಷಗಳ ಹಿಂದೆ ದೇಶದಲ್ಲಿ ಕೋವಿಡ್‌ನ ಮೊದಲ ಪ್ರಕರಣ ಕೇರಳದಲ್ಲಿ ವರದಿಯಾಗಿತ್ತು. ನಂತರ ಕೋವಿಡ್‌ ಪಿಡುಗಿನ ಅಲೆಗಳು ಕಾಣಿಸಿಕೊಂಡು ಆಸ್ಪತ್ರೆಗಳು ಸೋಂಕಿತರಿಂದ ಭರ್ತಿಯಾಗಿದ್ದವು. ಸೋಂಕಿತರು ಉಸಿರಾಟ ಸಮಸ್ಯೆ, ಶ್ವಾಸಕೋಶ ಹಾನಿಯಿಂದ ಅಕ್ಷರಶಃ ತತ್ತರಿಸುವಂತಾಯಿತು. 

ಸುಮಾರು 4.46 ಕೋಟಿ ಜನರು ಕೋವಿಡ್‌ ಸೋಂಕಿತರಾಗಿ, 5,30,740 ಜನರು ಕೋವಿಡ್‌ ಸೋಂಕಿನಿಂದ ಮೃತಪಟ್ಟರು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು