ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ತಡರಾತ್ರಿ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತಗೊಂಡಿವೆ.
ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿರುವ ದೃಶ್ಯಗಳು ಕಂಡುಬಂದವು.
‘ದೆಹಲಿ-ಎನ್‌ಸಿಆರ್‌ನಲ್ಲಿ (ಗುರುಗ್ರಾಮ, ಫರಿದಾಬಾದ್, ಮನೇಸರ್) ಕರ್ನಾಲ್, ಸೋನಿಪತ್, ಝಜ್ಜರ್, ಪಾಣಿಪತ್ ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ’ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿಯಲ್ಲಿ ಜ. 9ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯ ಹಲವೆಡೆ ಮಳೆಯಾಗುತ್ತಿರುವುದರಿಂದ ಕಡಿಮೆ ತಾಪಮಾನ ದಾಖಲಾಗಿದೆ. ಜತೆಗೆ, ನಿರಾಶ್ರಿತರನ್ನು ತಾತ್ಕಾಲಿಕ ಶೆಡ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ 17,335 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ದೆಹಲಿಯಲ್ಲಿ 39,873 ಸಕ್ರಿಯ ಪ್ರಕರಣಗಳಿವೆ. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ 17.73 ರಷ್ಟಿದ್ದು, ಮರಣ ಪ್ರಮಾಣ ಶೇ 1.67 ರಷ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.