ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಎಸಿ ಏಕಪಕ್ಷೀಯ ಬದಲಾವಣೆ ಯತ್ನಕ್ಕೆ ಒಪ್ಪಿಗೆ ಇಲ್ಲ: ಜೈಶಂಕರ್

Last Updated 1 ಜನವರಿ 2023, 7:17 IST
ಅಕ್ಷರ ಗಾತ್ರ

‌‌ನಿಕೋಸಿಯಾ (ಪಿಟಿಐ): ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಯಾವುದೇ ಪ್ರಯತ್ನವನ್ನು ಭಾರತ ಒಪ್ಪುವುದಿಲ್ಲ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪ್ರತಿಪಾದಿಸಿದರು.

ಸೈಪ್ರಸ್‌ನಲ್ಲಿ ಶುಕ್ರವಾರ ಭಾರತೀಯ ಸಮುದಾಯ ಉದ್ದೇಶಿಸಿ ಮಾತನಾಡಿದ ಜೈಶಂಕರ್, ಭಾರತವನ್ನು ಸಂಧಾನಕ್ಕೆ ಒತ್ತಾಯಿಸಲು ಭಯೋತ್ಪಾದನೆಯನ್ನು ಸಾಧನವಾಗಿ ಬಳಸಲಾಗುವುದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಭಾರತವು ತನ್ನ ಗಡಿಗಳಲ್ಲಿ ಹಲವು ಸವಾಲು ಹೊಂದಿದ್ದು, ಇದು ಕೋವಿಡ್ ಅವಧಿಯಲ್ಲಿ ತೀವ್ರಗೊಂಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT