ಶುಕ್ರವಾರ, ಮಾರ್ಚ್ 31, 2023
23 °C

ಮಧ್ಯಪ್ರದೇಶ: ಐದು ಮರಿಗಳಿಗೆ ಜನ್ಮ ನೀಡಿದ ಹುಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಂಡಲಾ, ಮಧ್ಯಪ್ರದೇಶ: ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್‌) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

‘ಸಂರಕ್ಷಿತ ಪ್ರದೇಶದ ಮುಕ್ಕಿ ವಲಯದಲ್ಲಿ, ಟಿ–27 ಎಂಬ ಹೆಸರಿನ ಹುಲಿಯು ಮೊದಲ ಬಾರಿಗೆ ತನ್ನ ಮರಿಗಳೊಂದಿಗೆ ಶನಿವಾರ ಕಾಣಿಸಿಕೊಂಡಿದೆ’ ಎಂದು ಕ್ಷೇತ್ರ ನಿರ್ದೇಶಕ ಎಸ್‌.ಕೆ. ಸಿಂಗ್‌ ಅವರು ಹೇಳಿದ್ದಾರೆ.

‘ತಾಯಿ ಹುಲಿಯ ವಯಸ್ಸು 9 ವರ್ಷವಾಗಿದ್ದು, ಬಹುಶಃ ಕಳೆದ ವರ್ಷದ ನವೆಂಬರ್‌ನಲ್ಲಿ ಈ ಮರಿಗಳಿಗೆ ಜನ್ಮ ನೀಡಿರಬಹುದು. ಹುಲಿಮರಿಗಳಿಗೆ ಈಗ ಸುಮಾರು ಮೂರು ತಿಂಗಳು ವಯಸ್ಸು’ ಎಂದು ಕೆಟಿಆರ್‌ನ ಹಿರಿಯ ವನ್ಯಜೀವಿ ಪಶುವೈದ್ಯ ಸಂದೀಪ್‌ ಅಗರ್ವಾಲ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು