ಶನಿವಾರ, ಡಿಸೆಂಬರ್ 3, 2022
26 °C

ಸತ್ಯೇಂದ್ರ ಜೈನ್‌ಗೆ ವಿಶೇಷ ಆತಿಥ್ಯ: ಸೂಪರಿಂಟೆಂಡೆಂಟ್‌ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಎಎಪಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ವಿಶೇಷ ಆತಿಥ್ಯ ನೀಡಿದ ಆರೋಪ ಸಂಬಂಧ ತಿಹಾರ್‌ ಜೈಲಿನ ಸೂಪರಿಂಟೆಂಡೆಂಟ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

‘ಜೈನ್‌ ಅವರಿಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣದಲ್ಲಿ ಅಕ್ರಮ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಸೂಪರಿಂಟೆಂಡೆಂಟ್‌ ಅಜಿತ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ’ ಎಂದು ದೆಹಲಿ ಸರ್ಕಾರದ ಕಾರಾಗೃಹ ಇಲಾಖೆ ಮೂಲಗಳು ತಿಳಿಸಿವೆ.

ತಿಹಾರ್‌ ಜೈಲಿನಲ್ಲಿ ಜೈನ್‌ ಅವರಿಗೆ ವಿಶೇಷ ಆತಿಥ್ಯ ಲಭ್ಯವಾಗುತ್ತಿದೆ ಎಂದು ಕಳೆದವಾರ ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು