ಕಾಲಮಿತಿಯಲ್ಲಿ ದೆಹಲಿ ಮೇಯರ್ ಚುನಾವಣೆ: ‘ಸುಪ್ರೀಂ’ ಮೆಟ್ಟಿಲೇರಿದ ಎಎಪಿ

ನವದೆಹಲಿ: ದೆಹಲಿ ಮೇಯರ್ ಸ್ಥಾನಕ್ಕೆ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸುವಂತೆ ಕೋರಿ ಎಎಪಿ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮೇಯರ್ ಮತ್ತು ಉಪಮೇಯರ್ ಆಯ್ಕೆ ಮಾಡಲು ಮಂಗಳವಾರ ದೆಹಲಿ ಮಹಾನಗರ ಪಾಲಿಕೆಯಲ್ಲಿ(ಎಂಸಿಡಿ) ಎರಡನೇ ಬಾರಿಗೆ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲೂ ಗದ್ದಲ ಉಂಟಾದ ಕಾರಣ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೆನಾ ಅವರು ಮೇಯರ್ ಚುನಾವಣೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದರು.
ಒಬೆರಾಯ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.
ಬಿಜೆಪಿ ಸದಸ್ಯರು ಪುಂಡಾಟಿಕೆ ನಡೆಸುತ್ತಿದ್ದಾರೆ ಮತ್ತು ಎಂಸಿಡಿಯ ಕಲಾಪಗಳನ್ನು ತಡೆಯುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.