ಶನಿವಾರ, ಡಿಸೆಂಬರ್ 4, 2021
26 °C

ಜಮ್ಮು ಮತ್ತು ಕಾಶ್ಮೀರದ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ: ಅಮಿತ್‌ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಇಲ್ಲಿಗೆ ಭೇಟಿ ನೀಡಿದ್ದಾರೆ.

ಭಗವತಿ ನಗರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು‌, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ₹ 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈ ಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದು ಕಿವಿಮಾತು ಹೇಳಿದ್ದಾರೆ.

ಶಾ ಅವರು ಮೂರು ದಿನಗಳ ಭೇಟಿ ಸಲುವಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಇವನ್ನೂ ಓದಿತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು