ತಿರುಪತಿ ಉಪ ಚುನಾವಣೆ: ರತ್ನಪ್ರಭಾ ಅವರನ್ನು ಕಣಕ್ಕಿಳಿಸಿದ ಬಿಜೆಪಿ

ತಿರುಪತಿ: ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಏ.17ರಂದು ಚುನಾವಣೆ ನಡೆಯಲಿದೆ. ಇಲ್ಲಿ ರತ್ನಪ್ರಭಾ ಅವರನ್ನು ಕಣಕ್ಕಿಳಿಸುವ ಕುರಿತು ಇತ್ತೀಚೆಗಷ್ಟೇ ಬಿಜೆಪಿ ಮೂಲಗಳು ಸುಳಿವು ನೀಡಿದ್ದವು.
ಈ ಲೋಕಸಭಾ ಕ್ಷೇತ್ರದ (ಎಸ್.ಸಿ) ಪ್ರತಿನಿಧಿಯಾಗಿದ್ದ ಬಲ್ಲಿ ದುರ್ಗಾ ಪ್ರಸಾದ್ ರಾವ್ ಅವರು ಕಳೆದ ಸೆಪ್ಟೆಂಬರ್ನಲ್ಲಿ ನಿಧನರಾಗಿದ್ದರು. ಆಂಧ್ರಪ್ರದೇಶದ ಮಾಜಿ ಐಎಎಸ್ ಅಧಿಕಾರಿ ದಾಸರಿ ಶ್ರೀನಿವಾಸುಲು, ತೆಲಂಗಾಣ ಕೇಡರ್ನ ನಿವೃತ್ತ ಮಾಜಿ ಐಪಿಎಸ್ ಅಧಿಕಾರಿ ಮುನಿ ಸುಬ್ರಹ್ಮಣ್ಯಂ ಅವರು ಸಹ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ರತ್ನಪ್ರಭಾ ಅವರಿಗೆ ಅವಕಾಶ ದೊರೆತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.