ಶನಿವಾರ, ಆಗಸ್ಟ್ 13, 2022
24 °C

ಕೊರೊನಾ ಸೋಂಕಿನಿಂದ ತಿರುಪತಿ ಸಂಸದ ಸಾವು: ಲೋಕಸಭೆಯಲ್ಲಿ ಸಂತಾಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುಪತಿ (ಆಂಧ್ರ ಪ್ರದೇಶ): ಕೋವಿಡ್‌–19ಗೆ ಚಿಕಿತ್ಸೆ ಪಡೆಯುತ್ತಿದ್ದ ತಿರುಪತಿ ಲೋಕಸಭಾ ಕ್ಷೇತ್ರದ ಸಂಸದ ಬಲ್ಲಿ ದುರ್ಗಾಪ್ರಸಾದ್‌ ರಾವ್ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. 

ವೈಎಸ್‌ಆರ್‌ ಕಾಂಗ್ರೆಸ್‌ನ ಸಂಸದರಾಗಿದ್ದ ರಾವ್‌, ಕೋವಿಡ್‌–19 ದೃಢಪಟ್ಟ ಕಾರಣದಿಂದ ಚಿಕಿತ್ಸೆಗಾಗಿ ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ‌ಮೂರು ಬಾರಿ ಶಾಸಕರಾಗಿ ಹಾಗೂ ರಾಜ್ಯ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ರಾವ್‌, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು ಅಗಲಿದ್ದಾರೆ.

ರಾವ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲೂ ಗುರುವಾರ, ಸಂಸದರು ಮೌನಾಚರಣೆ ಮುಖಾಂತರ ಸಂತಾಪ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು