ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ.
ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ ಎಂದು ರಾಜ್ಯಸಭೆಯ ಸಚಿವಾಲಯ ಬುಧವಾರ ತಿಳಿಸಿದೆ.
ಅರ್ಪಿತಾ ಅವರು ರಾಜೀನಾಮೆ ನೀಡಿರುವುದು ಟಿಎಂಸಿ ಮುಖಂಡರಿಗೂ ಅಚ್ಚರಿ ಮೂಡಿಸಿದೆ. ಅರ್ಪಿತಾ ಅವರ ಕಾರ್ಯವೈಖರಿ ಬಗ್ಗೆ ಪಕ್ಷಕ್ಕೆ ತೃಪ್ತಿ ಇರಲಿಲ್ಲ. ಹೀಗಾಗಿ, ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಲುರ್ಘಾಟ್ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ, ಅರ್ಪಿತಾ ಅವರನ್ನು 2020ರ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ನಾಮನಿರ್ದೇಶನ ಮಾಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.