ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಎಫ್ ಸಿಬ್ಬಂದಿಯಿಂದ ಅತ್ಯಾಚಾರ: ಅಮಿತ್ ಶಾ ಹೊಣೆ ಹೊರಬೇಕು ಎಂದ ಟಿಎಂಸಿ

Last Updated 29 ಆಗಸ್ಟ್ 2022, 1:33 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸಿಬ್ಬಂದಿಯಿಂದ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊತ್ತುಕೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷ ಆಗ್ರಹಿಸಿದೆ.

ಭಾರತದಿಂದ ಬಾಂಗ್ಲಾದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಮಹಿಳೆ ಮೇಲೆಆಗಸ್ಟ್‌ 26ರಂದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಿಎಸ್‌ಎಫ್‌ನ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಕಾನ್‌ಸ್ಟೆಬಲ್‌ ಬಂಧಿಸಲಾಗಿದೆ. ಆರೋಪಿಗಳನ್ನು ಅಮಾನತು ಮಾಡಲಾಗಿದ್ದು,ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದರು.

ಭಾನುವಾರ ಘಟನಾಸ್ಥಳಕ್ಕೆ ಭೇಟಿ ನೀಡಿದ ಟಿಎಂಸಿ ನಾಯಕ ಮತ್ತು ಸಚಿವ ಡಾ. ಶಶಿ ಪಂಜಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಮೌನವಾಗಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

'ಮಹಿಳೆಗೆ ಆಕೆಯಅಪ್ರಾಪ್ತ ಮಗುವಿನ ಎದುರೇ ಬಿಎಸ್ಎಫ್ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಈ ಘಟನೆಯನ್ನು ನಾವು ಖಂಡಿಸುತ್ತೇವೆ. ಈ ಕೃತ್ಯದ ಹೊಣೆಯನ್ನು ಕೇಂದ್ರ ಗೃಹ ಸಚಿವರು ಹೊರಬೇಕು ಎಂದು ಆಗ್ರಹಿಸುತ್ತೇವೆ' ಎಂದಿದ್ದಾರೆ.

ಆರೋಪಿಗಳ ವಿರುದ್ಧನ್ಯಾಯಾಂಗ ತನಿಖೆಗೆ ಆದೇಶಿಸಿರುವಬಿಎಸ್ಎಫ್‌ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

'ಈ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವರು ಮೌನ ವಹಿಸಿದ್ದಾರೆ. ಕೇಂದ್ರ ಸಶಸ್ತ್ರ ಪಡೆಗಳಿಗೆ ಸಲ್ಲುವ ಶ್ರೇಯವನ್ನು ಅವರು ಪಡೆದುಕೊಳ್ಳುತ್ತಾರೆ. ಹೀಗಿರುವಾಗ ಅವರೇಕೆ ಘಟನೆಯ ವಿರುದ್ಧ ಮಾತನಾಡುತ್ತಿಲ್ಲ ಅಥವಾ ಖಂಡಿಸುತ್ತಿಲ್ಲ? ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇವೆ. ಜೊತೆಗೆ ಕೂಲಂಕಷ ತನಿಖೆಗೆ ಆಗ್ರಹಿಸುತ್ತೇವೆ' ಎಂದು ಪಂಜಾ ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿರುವ ಪಂಜಾ, ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅನ್ನೂ ಭೇಟಿ ಮಾಡಿ ಸಂತ್ರಸ್ತೆಯ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT