ಶನಿವಾರ, ಮೇ 15, 2021
25 °C

ಶವಗಳನ್ನು ಮುಂದಿಟ್ಟುಕೊಂಡು ಮಮತಾ ಬ್ಯಾನರ್ಜಿ ರಾಜಕೀಯ: ಪ್ರಧಾನಿ ಮೋದಿ ಟೀಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಷಿಮ ಬಂಗಾಳದ ಮೊದಲ ನಾಲ್ಕು ಹಂತಗಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಒಡೆದುಹೋಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶವಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಆಸಾನ್‌ಸೋಲ್‌ನಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಮತದಾನದ ಕೊನೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯನಿಗೆ ಸೋಲಾಗಲಿದೆ ಎಂದಿದ್ದಾರೆ.

ಓದಿ: 

ಶವಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಹಳೆಯ ಚಾಳಿಯನ್ನು ಟಿಎಂಸಿ ಮುಖ್ಯಸ್ಥೆ ಈಗ ಮುಂದುವರಿಸಿದ್ದಾರೆ. ಕೂಚ್‌ ಬಿಹಾರ್‌ ಜಿಲ್ಲೆಯ ಸೀತಾಲಕುಚಿಯಲ್ಲಿ ದುರದೃಷ್ಟವಶಾತ್ ಮೃತಪಟ್ಟ ಐವರ ಸಾವಿಗೆ ರಾಜಕೀಯ ಬಣ್ಣ ಬಳಿಯಲು ಮಮತಾ ಯತ್ನಿಸುತ್ತಿದ್ದಾರೆ ಎಂದು ಮೋದಿ ದೂರಿದ್ದಾರೆ.

ನಾಲ್ಕು ಹಂತಗಳ ಮತದಾನದ ಬಳಿಕ ಟಿಎಂಸಿ ಒಡೆದುಹೋಗಿದೆ. 8 ಹಂತಗಳ ಮತದಾನ ಪೂರ್ಣಗೊಂಡ ಬಳಿಕ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅವರು ಹೇಳಿದ್ದಾರೆ.

ಓದಿ: 

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣವನ್ನೂ ಉಲ್ಲೇಖಿಸಿದ ಪ್ರಧಾನಿ, ಮಮತಾ ಹಾಗೂ ಅಭಿಷೇಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಸಾನ್‌ಸೋಲ್‌ನಲ್ಲಿ ಏಳನೇ ಹಂತದಲ್ಲಿ, ಏಪ್ರಿಲ್ 26ರಂದು ಮತದಾನ ನಡೆಯಲಿದೆ.

ಪಕ್ಷವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರುವ ಗುರಿಯೊಂದಿಗೆ ಮಮತಾ ಮತ್ತು ಅವರ ಸೋದರಳಿಯ ಅಭಿಷೇಕ್ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು