ಶುಕ್ರವಾರ, ಮಾರ್ಚ್ 31, 2023
32 °C
ಏಳು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ, ಉಪಚುನಾವಣೆಗೆ ಟಿಎಂಸಿ ಒತ್ತಾಯ

ಚುನಾವಣೆಗೆ ಒತ್ತಾಯ: ನಾಳೆ ಚುನಾವಣಾ ಆಯೋಗ ಭೇಟಿಯಾಗಲಿರುವ ಟಿಎಂಸಿ ನಿಯೋಗ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ‘ಕೋವಿಡ್‌–19’ ಸಾಂಕ್ರಾಮಿಕ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಾಕಿ ಉಳಿದಿರುವ ಏಳು ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಉಪ ಚುನಾವಣೆಗಳನ್ನು ನಡೆಸುವಂತೆ ಒತ್ತಾಯಿಸಲು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಿಯೋಗ ಗುರುವಾರ (ಜುಲೈ 15) ನವದೆಹಲಿಯಲ್ಲಿ ಚುನಾವಣಾ ಆಯೋಗವನ್ನು ಭೇಟಿ ಮಾಡಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎದುರು ಪರಾಭವಗೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಈ ಉಪ ಚುನಾವಣೆಗಳು ಮಹತ್ವದ್ದಾಗಿವೆ.

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದರೆ ನವೆಂಬರ್ 4ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಟಿಎಂಸಿ ನಾಯಕರು ಉಪಚುನಾವಣೆ ನಡೆಸಲು ಒತ್ತಾಯಿಸುತ್ತಿದ್ದಾರೆ.

’ಚುನಾವಣಾ ಆಯೋಗ ಉಪಚುನಾವಣೆಗಳನ್ನು ನಡೆಸಲು ಏಕೆ ವಿಳಂಬ ಮಾಡುತ್ತಿದೆ. ಅದು ಕೊರೊನಾ ಮೂರನೇ ಅಲೆಗಾಗಿ ಕಾಯುತ್ತಿದೆಯೇ? ಉಪಚುನಾವಣೆಯನ್ನು ಆದಷ್ಟು ಬೇಗ ನಡೆಸಬೇಕೆಂದು ನಾವು ಬಯಸುತ್ತೇವೆ’ ಎಂದು ರಾಜ್ಯಸಭೆಯ ಟಿಎಂಸಿ ಸಂಸದ್ಯ ಸುಖೇಂದು ಶೇಖರ್ ರೇ ಒತ್ತಾಯಿಸಿದ್ದಾರೆ.

ಪ್ರಸ್ತುತ ಸಚಿವ ಸಂಪುಟದಲ್ಲಿ  ಮಮತಾ ಬ್ಯಾನರ್ಜಿ ಮತ್ತು ಹಣಕಾಸು ಸಚಿವ ಅಮಿತ್ ಮಿತ್ರಾ ಇಬ್ಬರು ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗದೇ ಸಚಿವ ಸ್ಥಾನ ನಿರ್ವಹಿಸುತ್ತಿದ್ದಾರೆ. ಮಿತ್ರಾ ಅವರು ಅನಾರೋಗ್ಯದ ಕಾಣದಿಂದಾಗಿ, ಸಚಿವ ಸ್ಥಾನ ಬಿಟ್ಟುಕೊಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಅವರು ವಿಧಾನಸಭೆ ಪ್ರವೇಶಿಸಲು ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು