ಎಸ್‌ಜಿ ಹುದ್ದೆಯಿಂದ ತುಷಾರ್ ಮೆಹ್ತಾ ತೆಗೆಯಲು ಟಿಎಂಸಿ ಒತ್ತಾಯ

ನವದೆಹಲಿ: ಸಾಲಿಸಿಟರ್ ಜನರಲ್ (ಎಸ್‌ಜಿ) ಹುದ್ದೆಯಿಂದ ತುಷಾರ್ ಮೆಹ್ತಾ ಅವರನ್ನು ತೆಗೆದು ಹಾಕುವಂತೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದರ ನಿಯೋಗ ಸೋಮವಾರ ರಾಷ್ಟ್ರಪತಿ ಅವರನ್ನು ಭೇಟಿಯಾಗಲಿದೆ.
ತುಷಾರ್ ಮೆಹ್ತಾ ಅವರು ಪಶ್ಚಿಮ ಬಂಗಾಳದಲ್ಲಿನ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅವರಿಗೆ ನಿಯೋಗವು ವಿವರಿಸಲಿದೆ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.
ತುಷಾರ್ ಮೆಹ್ತಾ ಮತ್ತು ಸುವೇಂದು ಅಧಿಕಾರಿ ಭೇಟಿಯ ಬಗ್ಗೆ ಪ್ರಧಾನಿ ಅವರಿಗೂ ಸಂಸದರು ಪತ್ರ ಬರೆದಿದ್ದರು. ಈ ಭೇಟಿಯು ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದರು.
2016ರಲ್ಲಿನ ನಾರದಾ ಲಂಚ ಪ್ರಕರಣದಲ್ಲಿ ಸುವೇಂದು ಅಧಿಕಾರಿ ಆರೋಪಿಯಾಗಿದ್ದಾರೆ ಹಾಗೂ ಈ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಪರ ಸುಪ್ರೀಂ ಕೋರ್ಟ್ ಹಾಗೂ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮೆಹ್ತಾ ಪ್ರತಿನಿಧಿಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.