ಮಂಗಳವಾರ, ಸೆಪ್ಟೆಂಬರ್ 28, 2021
23 °C

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಗುಂಡಿಕ್ಕಿ ಹತ್ಯೆ: ಐವರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ಯುವ ನಾಯಕನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಹತ್ಯೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಟಿಎಂಸಿ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯು ಟಿಎಂಸಿಯಲ್ಲಿನ ಒಳ ಜಗಳದಿಂದ ಈ ಹತ್ಯೆ ನಡೆದಿದೆ ಎಂದು ಹೇಳಿಕೊಂಡಿದೆ.

ಟಿಎಂಸಿ ಯುವ ನಾಯಕರಾಗಿದ್ದ ರಣಜೋಯ್ ಕುಮಾರ್ ಶ್ರೀವತ್ಸ (33) ಅವರು ಶನಿವಾರ ಮುಂಜಾನೆ ತಮ್ಮ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಆ ವೇಳೆ ಕಾರು ತಡೆದು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಆಡಳಿತ ಪಕ್ಷದ ಕಾರ್ಯಕರ್ತರಲ್ಲಿ ಭಯ ಹುಟ್ಟಿಸಲು ಈ ದಾಳಿಯನ್ನು ಬಿಜೆಪಿ ರೂಪಿಸಿದೆ' ಎಂದು ಟಿಎಂಸಿ ಮುಖ್ಯಸ್ಥ ಜ್ಯೋತಿಪ್ರಿಯೊ ಮುಲ್ಲಿಕ್ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು