ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಸೆ.15 ರಂದು ತ್ರಿಪುರಾದಲ್ಲಿ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿಯಿಂದ ರೋಡ್‌ ಶೋ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಸೆ.15 ರಂದು ತ್ರಿಪುರಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್‌ನ ರೋಡ್‌ ಶೋ ಅನ್ನು ಸಂಸದ ಅಭಿಷೇಕ್‌ ಬ್ಯಾನರ್ಜಿ ಮುನ್ನಡೆಸಲಿದ್ದಾರೆ.

'ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ಸೆಪ್ಟೆಂಬರ್‌ 15ರಂದು ನಡೆಯಲಿರುವ ರೋಡ್‌ ಶೋಗೆ ಅಭಿಷೇಕ್‌ ಬ್ಯಾನರ್ಜಿ ನೇತೃತ್ವ ವಹಿಸಲಿದ್ದಾರೆ' ಎಂದು ತೃಣಮೂಲ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ.

ಬಿಜೆಪಿಯ ಆಡಳಿತವಿರುವ ತ್ರಿಪುರಾದಲ್ಲಿ ಇತ್ತೀಚೆಗೆ ಅಭಿಷೇಕ್‌ ಬ್ಯಾನರ್ಜಿ ಸೇರಿದಂತೆ ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು.

ತ್ರಿಪುರಾದಲ್ಲಿ ಬಿಜೆಪಿಯ ವಿರೋಧವನ್ನು ಮೆಟ್ಟಿ ತೃಣಮೂಲ ಕಾಂಗ್ರೆಸ್ ವಿಧಾನಸಭಾ ಚುನಾವಣೆ ಗೆಲ್ಲುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ. ತ್ರಿಪುರಾದಲ್ಲಿ ಟಿಎಂಸಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ದೆಹಲಿಯಲ್ಲಿ ಪರಿಣಾಮ ಉಂಟಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.

ತ್ರಿಪುರಾ ವಿಧಾನಸಭೆಗೆ 2023ರಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು